17 Sep 2024

TEACHERS’ DAY CELEBRATION – DATED ON 05-09-2024

ಸೆಪ್ಟೆಂಬರ 5 ರಂದು ನಮ್ಮ ಕಾಲೇಜಿನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮಕ್ಕೆ ನಿವೃತ್ತ ಪ್ರಾಂಶುಪಾಲರಾದ ಶ್ರೀ ಎಂ. ಆರ್. ಶೆಟ್ಟಿ ಇವರು ಅತಿಥಿಗಳಾಗಿ ಪಾಲ್ಗೊಂಡಿದ್ದರು. ನಮ್ಮ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ರಮೇಶ್ ದೇಶಪಾಂಡೆ ಇವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು . ಈ ಸಂದರ್ಭದಲ್ಲಿ ನಮ್ಮ ಕಾಲೇಜಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ದೇಣಿಗೆಯಾಗಿ ನೀಡಿದ ಶ್ರೀ ಎಂ ಆರ್. ಶೆಟ್ಟಿ ಯವರಿಗೆ ಅಭಿನಂದನಾ ಪತ್ರವನ್ನು ನೀಡಿ ಗೌರವಿಸಲಾಯಿತು. ಪ್ರಾಂಶುಪಾಲರ ವತಿಯಿಂದ ಎಲ್ಲಾ ಉಪನ್ಯಾಸಕ ವೃಂದದವರಿಗೆ ತಲಾ ಒಂದು ಪುಸ್ತಕವನ್ನು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು, ಉಪನ್ಯಾಸಕರುಗಳು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Download