29 Sep 2026

Haemoglobin test by Youth Red Cross– Dated on 25-09-2026

ನಮ್ಮ ಕಾಲೇಜಿನಲ್ಲಿ 25-09-2026 ರಂದು ಭಾರತೀಯ ಯುವ ರೆಡ್ ಕ್ರಾಸ್ ಘಟಕದ ವತಿಯಿಂದ, ಸ್ಕೋಡ್ ವೆಸ್ ಸಂಸ್ಥೆ ಸಹಯೋಗದಲ್ಲಿ ಹಿಮೋಗ್ಲೋಬಿನ್ ತಪಾಸಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸೇರಿದಂತೆ 240ಕ್ಕೂ ಹೆಚ್ಚು ಜನ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು. ಕಾರ್ಯಕ್ರಮದಲ್ಲಿ ಪ್ರಾಚಾರ್ಯರಾದ ಶಾಂತರಾಮ್ ಭಟ್ ಹಾಗೂ ಯುವ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಎಸ್. ಟಿ ಹೆಗಡೆ ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿಗಳು ಭಾಗವಹಿಸಿದ್ದರು.

Download