19
Feb 2026
REPUBLIC DAY–DATED ON 26-01-2026


ನಮ್ಮ ಕಾಲೇಜಿನಲ್ಲಿ 77ನೇ ಗಣರಾಜ್ಯೋತ್ಸವ ದಿನವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಕಾಲೇಜಿನ ಪ್ರಾಚಾರ್ಯರಾದ ಶ್ರೀ ಜಿ. ಜಿ ಹೆಗಡೆ ಯವರು ಧ್ವಜಾರೋಹಣವನ್ನು ನಡೆಸಿ ಎಲ್ಲ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿಶೇಷವಾಗಿ “ಆತ್ಮ ನಿರ್ಭರ ಭಾರತ” ಅಭಿಯಾನದಡಿಯಲ್ಲಿ ಭಾರತ ಅಭಿವೃದ್ಧಿ ಸಾಧಿಸುತ್ತಿರುವುದನ್ನು ಶ್ಲಾಘಿಸಿದರು ಹಾಗೂ ತಾಂತ್ರಿಕ ಶಿಕ್ಷಣವನ್ನು ಪಡೆಯುತ್ತಿರುವ ವಿದ್ಯಾರ್ಥಿಗಳು ಭಾರತದ ಅಭಿವೃದ್ಧಿಗೆ ತಮ್ಮ ಸೇವೆಯನ್ನು ನೀಡಬೇಕು ಎಂದು ಕರೆ ನೀಡಿದರು. ಈ ಕಾರ್ಯಕ್ರಮದಲ್ಲಿ ಎಲ್ಲಾ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಜರಿದ್ದರು.